Header Ads

Seo Services

ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಮುಂದಾಗಿರುವ ಸರ್ಕಾರ 10,187 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನಿಸಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ನೇಮಕ ಕಾರ್ಯ ನಡೆಸಲು ನಿರ್ಧರಿಸಿದ್ದು, ಸಂವಿಧಾನದ ಅನುಚ್ಛೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಈಗಾಗಲೇ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುವ ಪ್ರಕರಣಗಳನ್ನು ಆದಷ್ಟುಶೀಘ್ರವೇ ಪೂರ್ಣಗೊಳಿಸಬೇಕು. 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೊರಡಿಸಿರುವ ಸುತ್ತೋಲೆ ಪ್ರಕಾರ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬಬೇಕು, ಗ್ರೂಪ್‌ ಡಿ ಹಾಗೂ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹೈದರಾಬಾದ ಭಾಗದ ಆರು ಜಿಲ್ಲೆಗಳ ಜನರಿಗೆ ‘ಸಿ’ ಗುಂಪಿನ ಹುದ್ದೆಗಳಲ್ಲಿ ಗರಿಷ್ಠ ನೇಮಕಾತಿ ನಡೆಯಲಿದೆ.   https://www.facebook.com/Kanasina-kannadi-829909564007745/

No comments:

Powered by Blogger.